ರಾಮನಗರ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದೆ. ಎಲ್ಲೆಲ್ಲೂ ಸಾಲಕೊಟ್ಟು ಜನರನ್ನ ಫೈನಾನ್ಸ್ ಕಂಪನಿಗಳು ಶೂಲಕ್ಕೆ ಏರಿಸುತ್ತಿವೆ. ಇದೀಗ ಸಾಲಗಾರರ ಕಿರುಕುಳಕ್ಕೆ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಯಶೋದಮ್ಮ(60) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಬಲಿಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಇವರು 8ಕ್ಕೂ ಹೆಚ್ಚು ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದಿದ್ದರು.
ಸಾಲಗಾರರ ಕಾಟಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



