HomeKarnataka Newsಕಾಡಾನೆ ದಾಳಿಯಿಂದ ಕಾರ್ಮಿಕರಿಗೆ ಗಾಯ: ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

ಕಾಡಾನೆ ದಾಳಿಯಿಂದ ಕಾರ್ಮಿಕರಿಗೆ ಗಾಯ: ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

For Dai;y Updates Join Our whatsapp Group

ಸಿದ್ದಾಪುರ: ಕರಡಿಗೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕಾಡಾನೆ ದಾಳಿ ಮಾಡಿ ಗಾಯ ಗೊಳಿಸಿದ ಘಟನೆ ನಡೆದಿದೆ. ಕಣ್ಣನ್ ಹಾಗೂ ಅಸ್ಸಾಂ ಮೂಲದ ಸಾಬುಅಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಡಾನೆಗಳು ಇತ್ತೀಚೆಗೆ ಕರಡಿಗೋಡು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇನ್ನೂ ಘಟನೆಯ ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈಗ ಕಾರ್ಮಿಕರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿರುವುದರಿಂದ ಕಾರ್ಮಿಕರು, ರೈತರು, ಗ್ರಾಮಸ್ಥರು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಯದಿದ್ದರೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳು ಎಚ್ಚರಿಕೆ ನೀಡಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img