ಬೆಳಗಾವಿ: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ ಎದುರಾಗುತ್ತೆ ಶಾಕ್? ನವೆಂಬರ್ ಕ್ರಾಂತಿಯೋ, ಇಲ್ಲ ಬ್ರಾಂತಿಯೋ? ನಾಯಕತ್ವ ಬದಲಾವಣೆ ಖಚಿತ ಅಂತಾ ಬಿಜೆಪಿಯವರು ನುಡಿಯುತ್ತಿರುವ ಭವಿಷ್ಯ ನಿಜವಾಗುತ್ತದೆಯಾ? ಈ ಎಲ್ಲಾ ಪ್ರಶ್ನೆಗಳು ಈಗ ಕರ್ನಾಟಕ ರಾಜಕೀಯದಲ್ಲಿ ಹೆಚ್ಚಾಗಿವೆ.
ಇದೆಲ್ಲರದ ಮಧ್ಯೆ ಯತೀಂದ್ರ ಸಿದ್ದರಾಮಯ್ಯ ಆಡಿರುವ ಮಾತು ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ.
ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಹೇಳಿದ್ದಾರೆ. ಇವತ್ತು ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದಿದ್ದಾರೆ.



