ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದಿಂದ ಐಕ್ಯೂಎಸಿ ಅಡಿಯಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ. ಜೈನ ಮಾತನಾಡಿ, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ ಎಂದರು. ನಿಯಮಿತ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಯುತ್ತದೆ ಎಂದು ತಿಳಿಸಿದರು.
ಯೋಗ ಪ್ರದರ್ಶನದ ಬಳಿಕ ಎನ್‌ಎಸ್‌ಎಸ್ ಸ್ವಯಂಸೇವಕರಿಂದ ಸ್ಟಂಟ್ ಪ್ರದರ್ಶನವೂ ನಡೆಯಿತು. ಕಾರ್ಯಕ್ರಮದಲ್ಲಿ ಕಲಾ ವಿಭಾಗದ ಕಾರ್ಯದರ್ಶಿ ಕು. ವರ್ಷ ಕಲ್ಕಂಬಿ, ಕುಮಾರ ಅಂಕುಶ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ-ಸ್ವಯಂಸೇವಕಿಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು



