HomePolitics Newsರಾಷ್ಟ್ರ ಹಾಗೂ ಕನ್ನಡ ಧ್ವಜಕ್ಕೆ ಒಂದು ದಿನ ಗೌರವ ಕೊಟ್ಟಿಲ್ಲ ನೀನು: HDK ವಿರುದ್ಧ ಏಕವಚನದಲ್ಲೇ...

ರಾಷ್ಟ್ರ ಹಾಗೂ ಕನ್ನಡ ಧ್ವಜಕ್ಕೆ ಒಂದು ದಿನ ಗೌರವ ಕೊಟ್ಟಿಲ್ಲ ನೀನು: HDK ವಿರುದ್ಧ ಏಕವಚನದಲ್ಲೇ ಡಿಕೆಶಿ ವಾಗ್ದಾಳಿ!

For Dai;y Updates Join Our whatsapp Group

Spread the love

ಮಂಗಳೂರು:– ಕೇಂದ್ರ ಸಚಿವನಾಗಿರುವ ಆ ಕುಮಾರಸ್ವಾಮಿ ಒಂದು ದಿನಕ್ಕೂ ರಾಷ್ಟ್ರ ಹಾಗೂ ಕನ್ನಡ ಧ್ವಜಕ್ಕೆ ಗೌರವ ಕೊಟ್ಟಿಲ್ಲ ಎಂದು ಹೇಳುವ ಮೂಲಕ HDK ವಿರುದ್ಧ ಏಕವಚನದಲ್ಲೇ DCM ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಿಸ್ಟರ್ ಕುಮಾರಸ್ವಾಮಿ, ನಿಮ್ಮ ಅವಧಿಯಲ್ಲಿ ರಾಷ್ಟ್ರಧ್ವಜ ಹಾರಿಸೋಕೆ ಒಂದು ದಿನವೂ ರಾಮನಗರಕ್ಕೆ ಹೋಗಿಲ್ಲ. ಚನ್ನಪಟ್ಟಣಕ್ಕೂ ಹೋಗಿಲ್ಲ. ಕನ್ನಡ ಬಾವುಟ ಹಾರಿಸಲು ಸಂವಿಧಾನದ ವ್ಯವಸ್ಥೆಯಲ್ಲಿ ನಿನ್ನನ್ನು ರಾಮನಗರ, ಚನ್ನಪಟ್ಟಣದ ಜನ ಆಯ್ಕೆ ಮಾಡಿ ಕಳುಹಿಸಿಕೊಟ್ಟಿದ್ದರು. ಒಂದು ದಿನವೂ ಹೋಗಿ ನೀನು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿಲ್ಲ, ಕನ್ನಡ ಧ್ವಜಕ್ಕೂ ಗೌರವ ಕೊಟ್ಟಿಲ್ಲ ಎಂದರು.

ಇವರ ಅಳು ಎಲ್ಲಾ ಬರೋದೇ ಎಲೆಕ್ಷನ್ ಟೈಮ್‌ನಲ್ಲಿ. ಯಾವುದಾದರೂ ಒಂದು ಗುರುತಿಸುವ ಕೆಲಸ ಚನ್ನಪಟ್ಟಣಕ್ಕೆ ಮಾಡಿರೋದನ್ನ ತೋರಿಸು. ಕೆರೆ ಮಾಡಿದ್ದು ಯೋಗೇಶ್ವರ್, ದುಡ್ಡು ಕೊಟ್ಟಿದ್ದು ನಾನು. ನೀನು ಮುಖ್ಯಮಂತ್ರಿ ಆಗಿದ್ದಾಗಲೇ ಮಾಡಿಲ್ಲ. ಎಂಎಲ್‌ಎ ಆಗಿದ್ದಾಗ ಬಿಜೆಪಿ ಜೊತೆಗೆ ಸಂಪರ್ಕ ಇತ್ತು. ಗುರುತು ಮಾಡೋ ಕೆಲಸ ಮಾಡಬೇಕಿತ್ತಲ್ಲ. ಸುಮ್ಮನೆ ವೋಟಿಗೋಸ್ಕರ ಬಂದು ಮಾತನಾಡೋದಲ್ಲ. ಅಭ್ಯರ್ಥಿಗೆ ಲಾಸ್ ಏನೂ ಆಗಿಲ್ಲ, ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧ ಇಲ್ಲ. ಅವರು ಸೋತಿದ್ದು ಮಂಡ್ಯ ಹಾಗೂ ರಾಮನಗರದಲ್ಲಿ. ನೀನು, ನಿನ್ನ ಧರ್ಮಪತ್ನಿ ಇದ್ದರೂ ಇಲ್ಲಿಗೆ ನೀನು ಏನು ಕೊಟ್ಟೆ? ಚನ್ನಪಟ್ಟಣಕ್ಕೆ ನೀನು ಏನು ಕೊಟ್ಟೆ ಎಂದು ಹೇಳಬೇಕು ಎಂದು ಆಗ್ರಹಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!