HomeCrime Newsಚಿಕ್ಕಮಗಳೂರು: ಮುಂದಿನ ತಿಂಗಳು ಮದುವೆಯಾಗಬೇಕಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ!

ಚಿಕ್ಕಮಗಳೂರು: ಮುಂದಿನ ತಿಂಗಳು ಮದುವೆಯಾಗಬೇಕಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ!

For Dai;y Updates Join Our whatsapp Group

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ 25 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಮಧುಗುಂಡಿ ಗ್ರಾಮದ ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೇ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25 ರಂದು ಮದುವೆ ನೆರವೇರಬೇಕಿತ್ತು. ಎರಡೂ ಕುಟುಂಬದವರು ಮದುವೆಯ ಸಂಭ್ರಮದಲ್ಲಿದ್ದು, ಸಿದ್ಧತೆಗಳಲ್ಲಿ ತೊಡಗಿದ್ದರು.

ನಾಲ್ಕು ದಿನಗಳ ಹಿಂದೆ ಅಭಿಷೇಕ್ ಮನೆಯಲ್ಲೇ ವಿಷ ಸೇವಿಸಿದ್ದ. ತಕ್ಷಣವೇ ಆತನನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

ಎದೆಮಟ್ಟಕ್ಕೆ ಬೆಳೆದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದ್ದು, ಮಗಳ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ವಧುವಿನ ಕುಟುಂಬಸ್ಥರೂ ಕಣ್ಣೀರಿಡುತ್ತಿದ್ದಾರೆ. ಸಂಭ್ರಮದಿಂದ ಕಂಗೊಳಿಸಬೇಕಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಅಭಿಷೇಕ್ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img