ವಿಜಯಸಾಕ್ಷಿ ಸುದ್ದಿ, ಗದಗ
ಏಪ್ರಿಲ್ 27 ಮಂಗಳವಾರ ಜಿಲ್ಲೆಯಲ್ಲಿ ಸೋಂಕು ಸ್ಫೋಟಗೊಂಡಿದೆ. 119 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಎರಡನೇ ಅಲೆ ಇದೇ ಮೊದಲ ಬಾರಿಗೆ ಶತಕ ದಾಟಿದೆ.
ಇಂದಿನ 119 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12319 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -98 , ಮುಂಡರಗಿ-04, ನರಗುಂದ-04, ರೋಣ-11, ಶಿರಹಟ್ಟಿ-01, ಹೊರಜಿಲ್ಲೆಯ-01 ಸೇರಿದಂತೆ 119 ಪ್ರಕರಣಗಳು ದೃಢಪಟ್ಟಿವೆ.
ಇದುವರೆಗೂ ಜಿಲ್ಲೆಯಲ್ಲಿ
141 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 60 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 11585 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಮಂಗಳವಾರದಂದು ಜಿಲ್ಲೆಯಲ್ಲಿ 593 ಪ್ರಕರಣಗಳು ಸಕ್ರಿಯವಾಗಿದ್ದು, ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರೀಕ್ಷೆಗಾಗಿ ಸಂಗ್ರಹಿಸಿದ 336778 ಮಾದರಿಗಳಲ್ಲಿ 324206 ಮಾದರಿಗಳು ನಕಾರಾತ್ಮಕವಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.



