ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಇಂದಿನಿಂದ ಆರಂಭವಾಗಿರುವ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಹವ್ಯಾಸಿ ಛಾಯಾಗ್ರಾಹ , ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ
ಅಮರದೀಪ್ ಪಿ.ಎಸ್.ರಿಂದ ಛಾಯಾಚಿತ್ರ ಪ್ರದರ್ಶನ ನಡೆಯುತ್ತಿದೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ. 4 ಮತ್ತು 5ರಂದು ಆಯೋಜನೆಯಾಗಿರುವ
ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ
ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೋವಿಡ್ ನಂತರದ ಮೊದಲ ಚಿತ್ರ ಪ್ರದರ್ಶನ ಇದಾಗಿದೆ.
ಅಮರದೀಪ ಖ್ಯಾತ ಹವ್ಯಾಸಿ ಛಾಯಾಗ್ರಾಹಕರೂ ಹೌದು. ಈ ಹಿಂದೆಯೂ ಅವರು ಹಲವಾರು ಸಂದರ್ಭಗಳಲ್ಲಿ ವಿವಿಧ ವಿಷಯಗಳ
ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಿದ್ದಾರೆ. ಈ ಹಿಂದಿನ ಛಾಯಾಚಿತ್ರಗಳ ಪ್ರದರ್ಶನಗಳಿಗೆ ನೋಡುಗರಿಂದ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಿತ್ತು. ಛಾಯಾಚಿತ್ರ ಪ್ರದರ್ಶನದಲ್ಲಿ 60 ವಿವಿಧ ಛಾಯಾಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಟ್ರಾವೆಲ್ ಫೋಟೋಗ್ರಾಫಿ ವಿಷಯದಡಿಯಲ್ಲಿ ತೆಗೆದ ಪೋಟೊಗಳ ಪ್ರದರ್ಶನ ಗಮನ ಸೆಳೆಯಿತು.