ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
Advertisement
ಆಕಸ್ಮಿಕವಾಗಿ ಹೊತ್ತಿಕೊಂಡು ಬೆಂಕಿ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆ ಜೋಳ ನಾಶ ವಾಗಿರುವ ಘಟನೆ ಗದಗ ತಾಲೂಕಿನ ನಾಗಾವಿ ತಾಂಡಾದಲ್ಲಿ ನಡೆದಿದೆ. ಲಕ್ಷ್ಮಣ ಪವಾರ್ ಎಂಬುವರಿಗೆ ಸೇರಿದ ಮೆಕ್ಕೆಜೋಳ ಇದಾಗಿದ್ದು ಒಂದು ತಿಂಗಳ ಹಿಂದೆ ತೆನೆ ಮುರಿದು ಹೊಲದಲ್ಲಿ ಕೂಡಿಹಾಕಿದ್ದರು.
11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಮಾರು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ಬೆಂಕಿ ನಂದಿಸಲು ಗ್ರಾಮಸ್ಥರು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸುದ್ದಿ ತಿಳಿದು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.