ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ’ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿ ಪುರಸ್ಕೃತರಾದ ಎಂ.ಎಂ. ಜೋಗಿನ್, ಪ್ರೊ.ಸುಮಿತ್ರಾ ಎಂ.ಜೋಗಿನ್ ಹಾಗೂ ಪ್ರೊ.ವೀಣಾ ತಿರ್ಲಾಪುರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಶ್ರೀ.ಎಂ.ಎಂ.ಜೋಗಿನ ಶಿಕ್ಷಕರ ನಿವಾಸದಲ್ಲಿ ಏರ್ಪಡಿಸಲಾಗಿತ್ತು.
ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸುಮಾ ಪಾಟೀಲ್ ಅಧ್ಯಕ್ಷತೆ ವಹಿಸಿ ಬದುಕಿಗೆ ಶಿಕ್ಷಣ ತುಂಬಾ ಅವಶ್ಯಕ. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕ ಎಂ.ಎಂ. ಜೋಗಿನ್, ಕ್ಲಬ್‌ನ ಕಾರ್ಯ ಶ್ಲಾಘನೀಯ. ಸಮಾಜಮುಖಿ ಕಾರ್ಯಗಳನ್ನು ಮಾಡುವುದರೊಂದಿಗೆ ಕ್ಲಬ್ ಮೇಲ್ಪಂಕ್ತಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಲಬ್‌ನ ಕಾರ್ಯದರ್ಶಿ ಸುಮಾ ವಸ್ತ್ರದ, ಕೋಶಾಧ್ಯಕ್ಷೆ ಅಶ್ವಿನಿ ಜಗತಾಪ, ಐ ಎಸ್‌ಒ ಮಂಜುಳಾ ಅಕ್ಕಿ ಹಾಗೂ ಪ್ರತೀಕ, ಅನುಶ್ರೀ ಉಪಸ್ಥಿತರಿದ್ದರು.
Advertisement