ವಿಜಯಸಾಕ್ಷಿ ಸುದ್ದಿ, ಬೆಂಗಳೂರು
Advertisement
ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ನೋವುಂಟಾಗಿದೆ. ಶ್ರೀಯುತರ ಅಗಲಿಕೆಯಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ, ಹಿರಿಯ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.
ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ಸಂತಾಪ ಸಂದೇಶದ ಮೂಲಕ ಪ್ರಾರ್ಥಿಸಿದ್ದಾರೆ.
ಸಜ್ಜನ ವ್ಯಕ್ತಿತ್ವ ಹೊಂದಿದ್ದ ಅವರ ಹಠಾತ್ ಮರಣದ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.