ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶ: ಜಿಲ್ಲೆಯ ವಿವಿದೆಡೆ ರೇಡ್| ಸಿಕ್ಕಿಬಿದ್ದ ಗಾಂಜಾವಾಲಾಗಳು ಯಾರು?

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗಾಂಜಾ ಬೆಳೆದು, ಒಣಗಿಸಿ ಮಾರುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು ಆತನಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಪ್ರವೀಣಗೌಡ ಭರಮಗೌಡ ಜಯನಗೌಡ್ರ ಬಂಧಿತ ಆರೋಪಿಯಾಗಿದ್ದು, ಮುಂಡರಗಿ ಸಿಪಿಐ ಎಸ್.ಎಂ ಬೆಂಕಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಆರೋಪಿತನಿಂದ 1 ಕೆಜಿ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ರೋಣದಲ್ಲಿಯೂ ರೇಡ್ ನಡೆದಿದ್ದು, ತಾಲೂಕಿನ ಸವಡಿ ಗ್ರಾಮದ ನಿಂಗನಗೌಡ ಸಂಗನಗೌಡ ಮುಗನೂರ(ಕರಮಡಿ) ಎಂಬಾತನನ್ನು ಡಿವೈಎಸ್ಪಿ ಶಿವಾನಂದ ಕಟಗಿ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದು, 5 ಸಾವಿರ ರೂ. ಮೌಲ್ಯದ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ದಂಧೆಯ ಜಾಲದ ಕುರಿತು ತನಿಖೆ ಆರಂಭವಾದ ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೆ ಗಾಂಜಾ ಮತ್ತು ಇತರ ಅಕ್ರಮ ಚಟುವಟಿಕೆಗಳಿಗೆ ತಡೆ ಹಾಕಲು ಸೂಚಿಸಿದ್ದಾರೆ ಎನ್ನಲಾಗಿದೆ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ಕಳೆದ 15 ದಿನದಿಂದ ಮದ್ಯದ ಅಕ್ರಮ ಮಾರಾಟ, ಗಾಂಜಾ ಮಾರಾಟದ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here