ವಿಜಯಸಾಕ್ಷಿ ಸುದ್ದಿ, ಮುಂಡರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಜಮೀನಿಗೆ ಬೆಂಕಿ ಹತ್ತಿದ ಪರಿಣಾಮ 8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.
Advertisement
ಗ್ರಾಮದ ರೈತ ಬೀರಪ್ಪ ಬಂಡಿ ಎನ್ನುವವರಿಗೆ ಸೇರಿದ ಜಮೀನು ಇದಾಗಿದ್ದು, 9 ಎಕರೆ ಜಮೀನಿನ ಪೈಕಿ 8 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸ ಪಟ್ಟರು.
ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬೆಂಕಿ ನಂದಿಸುವ ಕಾರ್ಯ ನಡೆದಿದೆ.