ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ಆಘಾತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಫೋಟದ ದುರಂತ ಸಂಭವಿಸಿದ್ದು ತೀವ್ರ ಆಘಾತಕಾರಿ ದುರ್ಘಟನೆಯಾಗಿದೆ. ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಇದನ್ನು ತಪ್ಪಿಸಬಹುದಿತ್ತು. ಈ ಘಟನೆಗೆ ಸರಕಾರವೇ ಹೊಣೆಯಾಗಿದೆ. ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರೆ ಸಾಲದು, ಅವರ ಕುಟುಂಬಗಳ ನಿರ್ವಹಣೆಗೆ ಪರಿಹಾರ ಧನದ ಜೊತೆಗೆ ಕುಟುಂಬದಲ್ಲಿ ಒಬ್ಬರಿಗೆ ಸರಕಾರಿ ನೌಕರಿಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶಿವಮೊಗ್ಗದ ಸ್ಫೋಟದ ನಂತರವೂ ಎಚ್ಚೆತ್ತುಕೊಳ್ಳದ ಸರ್ಕಾರ, ಅಕ್ರಮ ಕಲ್ಲು ಕ್ವಾರಿಗಳಿಗೆ, ಅಕ್ರಮ ಸ್ಫೋಟಕಗಳಿಗೆ ಕಡಿವಾಣ ಹಾಕುವ ಬದಲು ಬೆಂಬಲವಾಗಿದ್ದರ ಪರಿಣಾಮ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಸಂಭವಿಸಿದೆ. ಅದಕ್ಕೆ ನೇರ ಹೊಣೆ ಭೂ ಮತ್ತು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ. ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here