ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ:ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಇಕ್ಬಾಲ್ ಅನ್ಸಾರಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ಹುದ್ದೆಗೆ ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
Advertisement
ಮಾಧ್ಯಮ ಕ್ಷೇತ್ರದೊಂದಿಗಿನ ಉತ್ತಮ ನಂಟು, ಸಮಸ್ಯೆಗಳನ್ನು ನಿಭಾಯಿಸುವ ಸಾಮರ್ಥ್ಯ ಆಧರಿಸಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಉದ್ದೇಶಕ್ಕೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ವಕ್ತಾರ ಹುದ್ದೆಗೆ ನೇಮಿಸಿರುವುದಾಗಿ ಡಿ.ಕೆ. ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಎರಡು ಬಾರಿ ಸಚಿವರಾಗಿದ್ದ ಅನ್ಸಾರಿ ಅವರು, ಹೈದರಾಬಾದ್ ಕರ್ನಾಟಕದ ಪ್ರದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆ ಅವರಿಗೆ ಕೆಪಿಸಿಸಿ ಮಣೆ ಹಾಕಿದ್ದು, ಅನ್ಸಾರಿಯವರ ಆಯ್ಕೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚುವಂತೆ ಮಾಡಿದೆ.