ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರಿಂದ ಧರಣಿ
ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ಮತ್ತು ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ನಗರದ ಜಗತ್ ವೃತ್ತದಲ್ಲಿ ಧರಣಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿಗೆ ರೈತರು, ಕಾರ್ಮಿಕರು ಹಾಗೂ ಬಡ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸರ್ಕಾರಗಳು ಬ್ರಿಟಿಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ ಎಂದು ಕಿಡಿ ಕಾರಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ಫಾರಂ ಮಾತನಾಡಿ,
ಕೇಂದ್ರ ಸರ್ಕಾರ ರಿಯಲ್ ಎಸ್ಟೇಟ್ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಾಗಿದೆ. ಪ್ರಧಾನಿ ಮೋದಿಯವರ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬರಲಿದೆ ಎಂದು ಹರಿ ಹಾಯ್ದರು.
ಈ ಸಂದರ್ಭದಲ್ಲಿ , ಅಜೀಜ್ ಜಾಗಿರದಾರ್, ಸಲೀಂ ಅಹಮದ್ ಚಿತಾಪುರ, ಸಿದ್ದಣ್ಣ ಜಿ.ಚಕ್ರ, ಮೋಬಿನ್ ಅಹ್ಮದ್, ಅಜೀಜ್ ಪಟೇಲ್ ಯಾಳವಾರ್, ಮುನೀರ್ ಹಾಸ್ಮಿ, ಸಲೀಂ ಸದರಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.