32 C
Gadag
Friday, June 2, 2023

ಕೇಂದ್ರ ಸೂಚಿಸಿದಾಗ ಸಂಪುಟ ವಿಸ್ತರಣೆ: ಬಿಎಸ್‌ವೈ

Spread the love

-ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ.

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಹಲವು ದಿನಗಳಿಂದ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ನನೆಗುದಿ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ತಿಳಿಸಿದಾಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಕೊಪ್ಪಳದ ಬಸಾಪುರ ಏರ್‌ಸ್ಟ್ರಿಪ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸಂಪುಟ ಪುನರ್ರಚನೆ ಇಲ್ಲ, ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು.

ರಾಜ್ಯದ ಬಿಜೆಪಿ ಸಚಿವರು, ಶಾಸಕರ ಜೊತೆ ಯುವರಾಜ್ ಫೋಟೋ ತೆಗೆಸಿಕೊಂಡದ್ದು ಅಪರಾಧ ಏನಲ್ಲ. ಆದರೆ ಯುವರಾಜ ಪ್ರಕರಣ ತನಿಖೆ ಹಂತದಲ್ಲಿದೆ. ತನಿಖೆ ಮುಗಿದ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದರು.

ಕೋವಿಡ್ ಕಾರಣ, ಅತಿವೃಷ್ಟಿ, ಬರಗಾಲದ ಆಪತ್ತುಗಳಿಂದಾಗಿ ನಿರೀಕ್ಷಿಸಿದಷ್ಟು ಸರಕಾರದಿಂದ ಕೆಲಸ ಮಾಡಲಾಗಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸರಿ ಇಲ್ಲ. 40-50 ಸಾವಿರ ಬಜೆಟ್ ಖೋತಾ ಆಗಿದೆ. ಇವೆಲ್ಲವೂ ರಾಜ್ಯದ ಜನತೆಗೆ ಗೊತ್ತಿದೆ. ಜನರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ವಿವರಿಸಿದರು.

ದೇಶದಲ್ಲಿ ಮೊದಲ ಟಾಯ್ಸ್ ಕ್ಲಸ್ಟರ್ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಮಾಡ್ತಿದಿವಿ. ಕೆಲಸ ಆರಂಭವಾದ ಬಳಿಕ ಪ್ರಧಾನಿ ಮೋದಿಯವರಿಂದ ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ, ಆನಂದ್ ಸಿಂಗ್, ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ‌ ದಡೆಸೂಗುರು ಮತ್ತಿತರರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Posts