ವಿಜಯಸಾಕ್ಷಿ ಸುದ್ದಿ, ಬಳ್ಳಾರಿ
ಹರಕೆ ಹನ್ನೆರಡು ವರ್ಷವೆಂಬಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಒಂದು ಕೆಜಿ ತೂಕದ ಬೆಳ್ಳಿಯ ಹೆಲಿಕ್ಯಾಪ್ಟರ್ ಕಾಣಿಕೆ ಅರ್ಪಿಸಿ ಹರಕೆ ತೀರಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ಕಾಣಿಕೆ ನೀಡಿದ್ದಾರೆ.
ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ನಲ್ಲಿ ಹಾದು ಹೋದವರಿಗೆ ಸಂಕಷ್ಟ ಎದುರಿಸುತ್ತಾರೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ದೀಡ ನಮಸ್ಕಾರ ಹಾಕಿ, ರುದ್ರಸ್ನಾನ ವಿಧಿ ನೆರವೇರಿಸಿ,ಮೈಲಾರಲಿಂಗೇಶ್ವರನಿಗೆ ಪೂಜೆ ಸಲ್ಲಿಸಿ ಬೆಳ್ಳಿಯ ಹೆಲಿಕ್ಯಾಪ್ಟರ್ ನೀಡಿ ಹರಕೆ ತೀರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ದೇವಸ್ಥಾನಕ್ಕೆ ಬಂದಿದ್ದರಿಂದ ಅಪಚಾರ ಆಗಿತ್ತು. ಬಂದು ಹೋದ ನಂತರ ಕೆಲವೊಂದು ಸಮಸ್ಯೆಗಳು ಎದುರಾಗಿದ್ದವು. ಹಾಗಾಗಿ ಕಾರ್ಯಕರ್ತರು ಹಾಗೂ ದೇವಸ್ಥಾನದ ಗುರುಗಳ ಸಲಹೆ ಮೇರೆಗೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ದೇವಸ್ಥಾನದ ಮೇಲ್ಭಾಗದಲ್ಲಿ ಹೆಲಿಕ್ಯಾಪ್ಟರ್ ಹಾಯ್ದು ಹೋಗಿದ್ದರಿಂದ ಡಿಕೆಶಿ ಹಲವು ಸಂಕಷ್ಟ ಎದುರಿಸಿದ್ದರು. ಇಡಿ, ಜೈಲುವಾಸದಂಥ ಸಂಕಷ್ಟಕ್ಕೆ ಸಿಲುಕಿದ್ದರು.