ವಿಜಯಸಾಕ್ಷಿ ಸುದ್ದಿ, ಮೈಸೂರು
ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕಾಗಿ ಮಂಗಳವಾರ ಮೇಲ್ಮನೆಯಲ್ಲಿ ಕೋಲಾಹಲ ಉಂಟಾಗಿತ್ತು. ಗೊಂದಲ -ಗದ್ದಲಕ್ಕೆ ಕಾರಣವಾಗಿತ್ತು. ಅಲ್ಲದೇ, ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಜಂಗಿ ಕುಸ್ತಿ ನಡೆಯುವ ಹಂತಕ್ಕೆ ತಲುಪಿತ್ತು.
ಪರಿಷತ್ ಗಲಾಟೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಮುಂಚೆಯೇ ಸಭೆಯಲ್ಲಿ ನಿರ್ಧಾರವಾಗಿತ್ತು.
ಇದು ಕಾಂಗ್ರೆಸ್ ಪಕ್ಷದ ಪ್ರೀ ಪ್ಲ್ಯಾನ್ ಆಗಿತ್ತು ಎಂದು
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆರೋಪಿಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಲ್ ಪಿ ಸಭೆಯಲ್ಲಿ ಗಲಾಟೆ, ರೌಡಿಸಂ, ದಾಂಧಲೆ ಮಾಡಿ ಅಂತಾ ಹೇಳಿದ್ದಾರೆ. ಅವರು ಹೇಳಿಕೊಟ್ಟ ಹಾಗೇ ಮೇಲ್ಮನೆಯಲ್ಲಿ ನಡೆದಿದೆ ಎಂದು ದೂರಿದರು.
ಗೂಂಡಾಗಿರಿ ಮಾಡಿ ಗೌರವಾನ್ವಿತ ಉಪ ಸಭಾಪತಿ ಅವರನ್ನು ಬಲಾತ್ಕಾರವಾಗಿ ಎಳೆದಾಡಿದ್ದಾರೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನ ತೋರಿಸುತ್ತದೆ.
ಮೇಲ್ಮನೇ ಸದಸ್ಯರನ್ನ ಬುದ್ದಿವಂತ ಸದಸ್ಯರು ಅಂತ ಕರೆಯುತ್ತಾರೆ. ಆದರೆ, ಅವರು ನಡೆದುಕೊಂಡ ರೀತಿ ಸರಿಯಲ್ಲ. ಕಾಂಗ್ರೆಸ್ ಗೆ ಮಾನ ಮರ್ಯಾದೆ ಇದ್ದರೆ ಅವರೆಲ್ಲರನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ, ಮತ್ತೆ ಅದೇ ಸಂಸ್ಕೃತಿ ಮುಂದುವರೆಸುತ್ತಾರೆ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಊರೆಲ್ಲಾ ನ್ಯಾಯ ಮಾತನಾಡುತ್ತಾರೆ. ಇವರೇ ಗಲಾಟೆ ಮಾಡಿದವರನ್ನ ಪಕ್ಷದಿಂದ ಅಮಾನತು ಮಾಡಲಿ. ಸಭಾಪತಿ ಪೀಠಕ್ಕೆ ಅದರದ್ದೇ ಆದ ಗೌರವವಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಎಸ್.ಟಿ.ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು.