ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ನಂಜನಗೂಡು ತಾಲೂಕಿನ
ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿಗೆ ಅವಿರೋಧ ಆಯ್ಕೆಯಾಗುವ ಮೂಲಕ ಪೌರಕಾರ್ಮಿಕ ಪಿ.ನಂಜುಂಡ ಅವರ ಅದೃಷ್ಟದ ಬಾಗಿಲು ತೆರೆದಿದೆ.
ಸ್ವಂತ ನೆಲೆ ಇಲ್ಲದೇ ಗುಡಿಸಿಲಿನಲ್ಲಿ ವಾಸವಿರುವ ಪೌರಕಾರ್ಮಿಕ ನಂಜುಂಡನಿಗೆ ಭಾಗ್ಯದ ಬಾಗಿಲು ಒಲೆದು ಬಂದಿದೆ.
ಅವಿರೋಧ ಆಯ್ಕೆಯಾಗಿರುವ ನಂಜುಂಡ ಕೆಂಪಿಸಿದ್ದನಹುಂಡಿ ಗ್ರಾಮದ ಪೌರಕಾರ್ಮಿಕನಾಗಿದ್ದ ಪಿ.ನಂಜುಂಡ ಗ್ರಾಮದ ರಸ್ತೆಗಳನ್ನು ಸ್ವಚ್ಛ ಮಾಡುತ್ತಿದ್ದ. ಆದರೆ ಇದೀಗ ಅದೇ ಗ್ರಾ.ಪಂ.ಸದಸ್ಯನಾಗಿ ಆಯ್ಕೆಯಾಗಿದ್ದಾನೆ.
ಕೆಂಪಿಸಿದ್ದನಹುಂಡಿ ಗ್ರಾಮದ ಮೂರನೇ ವಾರ್ಡ್ ನಿಂದ ಸ್ಪರ್ಧೆಗಿಳಿದಿದ್ದ. ಇವನ ಪ್ರತಿಸ್ಪರ್ಧಿಗಾಗಿ ನಾಮಪತ್ರ ಸಲ್ಲಿಸಿದ್ದ ಬಸವರಾಜನ ಮನವೊಲಿಸಿ ನಾಮಪತ್ರ ಹಿಂಪಡೆಸಿ ನಂಜುಂಡನನ್ನು ಗ್ರಾಮದ ಮುಖಂಡರೇ ಸೇರಿ ಅವಿರೋಧ ಮಾಡಿದ್ದಾರೆ.