- ಮುಖ್ಯಮಂತ್ರಿಯಾದ ಬಳಿಕ ಮೈಸೂರಿಗೆ ಮೊದಲ ಭೇಟಿ
ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೆ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಮೈಸೂರಿಗೆ ಭೇಟಿ ನೀಡಿದರು. ಬೆಳಿಗ್ಗೆ ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದರು. ಚಾಮುಂಡಿ ಬೆಟ್ಟದಲ್ಲಿ ಸಿಎಂಗೆ ಪೂರ್ಣಕುಂಭ ಸ್ವಾಗತ ದೊರೆಯಿತು. ನಾಡದೇವತೆಗೆ ಪೂಜೆ ಸಲ್ಲಿಸಿದರು.

ಸಿಎಂಗೆ ಮೈಸೂರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಎಸ್.ಟಿ. ಸೋಮಶೇಖರ್, ಸಚಿವರಾದ ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ ನಿರಾಣಿ, ಡಾ.ಸುಧಾಕರ, ನಾರಾಯಣಗೌಡ, ಮುನಿರತ್ನ, ಗೋಪಾಲಗೌಡ ಸೇರಿ ಹಲವರು ಸಾಥ್ ನೀಡಿ ಪೂಜೆ ಸಲ್ಲಿಸಿದರು.
ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ಕುರಿತ ಮುಂಜಾಗ್ರತಾ ಸಭೆಯಲ್ಲಿ ಪಾಲ್ಗೊಂಡಿದ್ದರು.