ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಅತ್ಯಾಚಾರಕ್ಕೆ ಒಳಗಾಗಿ ದಾರುಣವಾಗಿ ಪ್ರಾಣ ತ್ಯಾಗ ಮಾಡಿದ ಮನಿಷಾ ವಾಲ್ಮೀಕಿ ಹತ್ಯೆಗೈದ ವಿಕೃತ ಕಾಮಿ ಕೋಮುವಾದಿ ಕಿಡಿಗೇಡಿಗಳನ್ನು ಗಲ್ಲಿಗೇರಿಸಲಿ ಅಥವಾ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿಂದು ಕಾಂಗ್ರೆಸ್‌ನ ಎಸ್ಸಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಶೋಕ ಸರ್ಕಲ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಅತ್ಯಾಚಾರಗೈದವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಸಾವಿಗೀಡಾದ ಮನಿಷಾ ವಾಲ್ಮೀಕಿ ಕುಟುಂಬಕ್ಕೆ ಪರಿಹಾರ ಕೊಡಬೇಕು. ಮತ್ತು ಕೇಂದ್ರ ಸರ್ಕಾರದ ವತಿಯಿಂದ 5 ಕೋಟಿ ರೂಪಾಯಿಗಳ ಮೊತ್ತದ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ದೇಶದ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ಭಾರದ ಹಾಗೇ ಸಂವಿಧಾನಾತ್ಮಕವಾಗಿ ಇಚ್ಛಾಶಕ್ತಿಯನ್ನು ಗೌರವಾನ್ವಿತ ರಾಷ್ಟ್ರಪತಿಗಳು ಎತ್ತಿ ಹಿಡಿಯಬೇಕೆಂದು JUSTICE FOR MANISHA VALMIKI “ ಎಂಬ ಅಭಿಯಾನದ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ್ ಹಿಟ್ನಾಳ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಗಾಳೆಪ್ಪ ಪೂಜಾರ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಕಾಟನ್ ಪಾಷಾ , ಸಲಿಂ ಅಳವಂಡಿ, ಶಿವಕುಮಾರ ಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.