ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಸಾಮಾಜಿಕ ಜಾಲತಾಣ ವಿಭಾಗದ ಆದೇಶದಂತೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರವೀಣ ಸಂಗಳದ ಅವರು ನೇಮಕವಾಗಿದ್ದಾರೆ.
ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟಿಸಬೇಕು. ವಾಟ್ಸ್ಆಪ್, ಪೇಸ್ಬುಕ್, ಟ್ವೀಟರ್, ಕ್ಲಬ್ಹೌಸ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷ ಬಲವರ್ಧನೆಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಆರ್.ನಾಯ್ಡು ಆದೇಶಿಸಿದ್ದಾರೆ.