ಜಿಲ್ಲಾ ನ್ಯಾಯಾಧೀಶ ರಾಜಶೇಖರ ಪಾಟೀಲರಿಂದ ಪೋಷಣ್ ರಥಕ್ಕೆ ಚಾಲನೆ
ಅಪೌಷ್ಠಿಕತೆ ತೊಲಗಿಸಿ, ಬಲಿಷ್ಠ ರಾಷ್ಟ್ರ ನಿರ್ಮಿಸಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಇವರ ಸಹಯೋಗದಲ್ಲಿ ಸೆ.೨೫ ರಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಪೋಷಣ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ರಾಜಶೇಖರ ಪಾಟೀಲ ಹಾಗೂ ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪೌಷ್ಠಿಕ ಆಹಾರದ ಜೊತೆಗೆ ಸೂಕ್ತ ಚಿಕಿತ್ಸೆ ನೀಡಬೇಕು. ಈ ಮೂಲಕ ದೇಶವನ್ನು ಅಪೌಷ್ಠಿಕತೆಯಿಂದ ಮುಕ್ತಗೊಳಿಸಿ, ಆರೋಗ್ಯವಂತ ಬಲಿಷ್ಠ ರಾಷ್ಟ್ರ ನಿರ್ಮಿಸಬೇಕು ಎಂದರು.

ಇದೊಂದು ನಿರಂತರ ಅಭಿಯಾನವಾಗಿದ್ದು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಜೊತೆಗೆ, ಅವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪೋಷಣ ಅಭಿಯಾನವು ಕೇವಲ ಒಂದು ಕಾರ್ಯಕ್ರಮವಲ್ಲ, ಬದಲಿಗೆ ಅದೊಂದು ಜನಾಂದೋಲನ ಮತ್ತು ಸಹಭಾಗಿತ್ವ ಆಗಿದೆ. ಸಂಬಂಧಿಸಿದ ಅಧಿಕಾರಿಗಳ ಸಮನ್ವಯತೆ, ಜನರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ರಾಜಶೇಖರ ಪಾಟೀಲ ಹೇಳಿದರು.


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಹೆಚ್.ಹೆಚ್.ಕುಕನೂರ, ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್ ಕೆ., ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here