ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಗುರಿವಾರ ದಿ 17 ರಂದು 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Advertisement
173 ಜನರಿಗೆ ಸೋಂಕು ತಗುಲುವ ಮೂಲಕ ಸೋಂಕಿತರ ಸಂಖ್ಯೆ 8055 ಕ್ಕೇರಿದೆ. ಗುರುವಾರ 192 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಇದುವರೆಗೂ 6958 ಜನ ಗುಣಮುಖರಾಗಿದ್ದಾರೆ. 982 ಜನ ಸಕ್ರಿಯ ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ಗುರುವಾರ ಜಿಲ್ಲಾಡಳಿತ ನೀಡಿದ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 115 ಕ್ಕೇರಿದೆ.