ವಿಜಯಸಾಕ್ಷಿ ಸುದ್ದಿ, ಮೈಸೂರು
ಕಾಲ ಚಕ್ರ ಉರುಳುತ್ತಾ ಇರುತ್ತೆ, ಆ ಸಮಯಕ್ಕೆ ಏನಾಗಬೇಕೋ ಅದು ಆಗುತ್ತೆ ಎಂದು ಜೆಡಿಎಸ್ ಕಾಲಕಾಲಕ್ಕೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷವನ್ನು ಪರೋಕ್ಷವಾಗಿ ಟೀಕಿಸಿದರು.
ಎನ್‌ಡಿಎ ಜೊತೆ ಜೆಡಿಎಸ್ ಕೈ ಜೋಡಿಸುವ ವಿಚಾರವಾಗಿ
ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಲ ಚಕ್ರ ಉರುಳಿದಂತೆ ರಾಜಕೀಯ ಬದಲಾವಣೆ ಆಗುತ್ತೆ.
ಹಿಂದೆ ಧರಂಸಿಂಗ್ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಡಿಸಿಎಂ ಆಗಿದ್ರು. ಕುಮಾರಸ್ವಾಮಿ ಸಿಎಂ ಆದಾಗ ಯಡಿಯೂರಪ್ಪ ಡಿಸಿಎಂ ಆಗಿದ್ರು. 2018 ರಲ್ಲಿ ಕುಮಾರಸ್ವಾಮಿ ಸಿಎಂ ಆದಾಗ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿರುವುದನ್ನು ನೆನಪಿಸಿದರು.
ಹೊಸ ವರ್ಷದಲ್ಲಿ ನನ್ನ ರಾಜಕೀಯ ಜೀವನದಲ್ಲಿ ಏನು ಬದಲಾವಣೆ ಇಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. 2023ಕ್ಕೆ ಬದಲಾವಣೆ ಆಗಬಹುದು ಎಂದರು.
ಮೈಸೂರು ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ನನ್ನನ್ನು ಕೇಳಿಲ್ಲ. ಈಗ ನಾನು ಉಸ್ತುವಾರಿ ಸಚಿವನಲ್ಲ. ನನ್ನ ಕೇಳ್ತಾರಾ? ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದರು.