ವಿಜಯಸಾಕ್ಷಿ ಸುದ್ದಿ, ಕೊಪ್ಪಳ
Advertisement
ಗಂಗಾವತಿ ತಾಲೂಕಿನ ದುರ್ಗಾ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬೆಳಗ್ಗೆ ಮೂರು ಗಂಟೆಯ ಸುಮಾರಿಗೆ ಚಿರತೆಯೊಂದು ಬಿದ್ದಿದೆ.
ಬೆಳಗ್ಗೆ ದೇಗುಲದ ಸಿಬ್ಬಂದಿ ಯುವಕರು ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಗಮನಿಸಿದ್ದಾರೆ.
ಬಳಿಕ ದೇಗುಲದ ಪ್ರಧಾನ ಅರ್ಚಕ ಬ್ರಹ್ಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇಗುಲದ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಇದೇ ದುರ್ಗಾ ಬೆಟ್ಟದಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ಚಿರತೆಯೊಂದು ಸೆರೆಯಾಗಿತ್ತು. ಇದೀಗ ಎರಡನೇ ಚಿರತೆ ಇದಾಗಿದ್ದು, ಬೆಟ್ಟದಲ್ಲಿ ಸೆರೆಯಾಗಿದೆ. ಇನ್ನು ಎಷ್ಟು ಚಿರತೆಗಳಿವೆ ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಆದರೆ, ಜನರಲ್ಲಿ ಚಿರತೆಗಳ ಬಗ್ಗೆ ಆತಂಕ ಮಾತ್ರ ದೂರವಾಗಿಲ್ಲ.