ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
Advertisement
ತಾಲ್ಲೂಕಿನ ಪು.ಬಡ್ನಿ ಗ್ರಾಮದ ರೈತನ ಜೋಳದ ಜಮೀನಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಬೆಳೆ ಹಾನಿ ಮಾಡಿದ್ದಾರೆ.
ಗ್ರಾಮದ ಭರಮಪ್ಪ ಕಾಂಬಳೆ ಎಂಬ ರೈತನ ಜಮೀನಿನಲ್ಲಿದ್ದ ಬೆಳೆಗೆ ಬೆಂಕಿ ಬಿದ್ದು ಬೆಳೆ ನಾಶವಾಗಿದೆ.
ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಿಳಿಜೋಳ ದುಷ್ಕರ್ಮಿಗಳ ಹೀನ ಕೃತ್ಯಕ್ಕೆ ಭಸ್ಮವಾಗಿದೆ. ವಾರದ ಹಿಂದಷ್ಟೇ ಅಕಾಲಿಕ ಮಳೆಗೆ ಜೋಳ ಬಿದ್ದು ಹಾಳಾಗಿತ್ತು. ಅಲ್ಪಸ್ವಲ್ಪ ಅಳೆದು ಉಳಿದಿದ್ದ ಬೆಳೆ ಸಂಪೂರ್ಣ ಕಟಾವಿಗೆ ಬಂದಿತ್ತು.
ರೈತ ಜೋಳದ ಬೆಳೆಯನ್ನು ಇನ್ನೊಂದು ವಾರದಲ್ಲಿ ಕಟಾವು ಮಾಡಬೇಕೆಂದುಕೊಂಡಿದ್ದ. ಅಷ್ಟರಲ್ಲೇ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಜಾನುವಾರುಗಳಿಗೂ ತಿನ್ನಲೂ ಬರದಂತೆ ಮೇವು ಸುಟ್ಟು ಕರಕಲಾಗಿದ್ದು, ರೈತ ಕಣ್ಣೀರು ಹಾಕುವಂತಾಗಿದೆ. ಸಂಕಷ್ಟಕ್ಕೊಳಗಾದ ರೈತನಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದರು.