ವಿಜಯಸಾಕ್ಷಿ ಸುದ್ದಿ, ಗದಗ:
ತೀವ್ರ ಕುತೂಹಲ ಮೂಡಿಸಿದ್ದ ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೊನೆಗೂ ಪ್ರಭಲ ಲಿಂಗಾಯತ ಪಂಚಮಸಾಲಿ ಸಮುದಾಯಕ ಒಲಿದಿದೆ.
ಸಿದ್ದು ಪಲ್ಲೇದ ಅವರನ್ನು ನೂತನ ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿ ಬುಧವಾರ ಆದೇಶ ಮಾಡಿದ್ದು, ಸಿದ್ದು ಪಲ್ಲೇದ ಅಧಿಕಾರ ಸ್ವೀಕರಿಸಿದರು. ಸಂಗಮೇಶ ದುಂದೂರು ಅಧಿಕಾರ ಹಸ್ತಾಂತರಿಸಿದರು.

ಕಳೆದ ಮಾರ್ಚ್ ತಿಂಗಳಲ್ಲಿ ಶ್ರೀ ಪತಿ ಉಡುಪಿ ಅವರನ್ನು ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿ ಆದೇಶ ಹೊರಡಿಸಿತ್ತು. ಇದರಿಂದಾಗಿ ಬಿಜೆಪಿ ಪಾಳೆಯದಲ್ಲಿ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ಕಾಂಗ್ರೆಸ್, ಬಿಜೆಪಿ ಪಕ್ಷದಲ್ಲಿ ಇರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರಲ್ಲಿ ತೀವ್ರ ಅಸಮಾಧಾನ ಮೂಡಿತ್ತು. ಹೀಗಾಗಿ ಶ್ರೀಪತಿ ಉಡುಪಿ ಅವರು ಅಧಿಕಾರ ಸ್ವೀಕರಿಸುವ ಮುನ್ನವೇ ಆದೇಶ ತಡೆಹಿಡಿಯಲಾಗಿತ್ತು.
ಇದನ್ನೂ ಓದಿ ಪ್ರಾಧಿಕಾರದ ಅಧ್ಯಕ್ಷರಾಗಿ ಶ್ರೀಪತಿ ಉಡುಪಿ ನೇಮಕ: ಬಿಜೆಪಿ ಪಾಳೆಯದಲ್ಲಿ ತೀವ್ರ ಅಸಮಾಧಾನ
ಮತ್ತೀಗ ಮೂರು ವರ್ಷಗಳ ಕಾಲ ಸಿದ್ದಪ್ಪ ಚನ್ನಬಸಪ್ಪ ಪಲ್ಲೇದ ಅವರನ್ನು ನೇಮಿಸಿ ಸರಕಾರದ ಅಧೀನ ಕಾರ್ಯದರ್ಶಿ ಲತಾ ಕೆ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಾಂತಿಲಾಲ್ ಬನ್ಸಾಲಿ, ನಗರಸಭೆ ಸದಸ್ಯರಾದ ವಿನಾಯಕ ಮಾನ್ವಿ, ಅನಿಲ ಅಬ್ಬಿಗೇರಿ, ಮುಖಂಡರಾದ ಪ್ರಶಾಂತ ನಾಯ್ಕರ್, ಕುಮಾರ್ ಮಾರನಬಸರಿ ಸೇರಿದಂತೆ ಅನೇಕರಿದ್ದರು.