ವಿಜಯಸಾಕ್ಷಿ ಸುದ್ದಿ, ಕಲಬುರಗಿ
Advertisement
ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ನಡೆದಿದೆ. ಗುರುರಾಜ್ ಕುಲಕರ್ಣಿ (35) ಕೊಲೆಯಾದ ವ್ಯಕ್ತಿ.
ಪಕ್ಕದ ಮನೆಯ ಪವನ್ ಜಾಗಿರದಾರ್ ಎಂಬಾತ ಗುರುರಾಜ್ ನ ಮನೆಯ ನಾಯಿಗೆ ಕಲ್ಲು ಹೊಡೆಯುತ್ತಿದ್ದ. ಇದೇ ವಿಚಾರಕ್ಕೆ ಎರಡು ತಿಂಗಳ ಹಿಂದೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು.
ನಿನ್ನೆ ರಾತ್ರಿ ಸಂಧಾನ ಮಾಡಿಕೊಳ್ಳಲು ಗುರುರಾಜ್‌ನನ್ನು ಕರೆಸಿಕೊಂಡಿದ್ದ ಪವನ್ ಜಾಗಿರದಾರ್, ತನ್ನ ಸ್ನೇಹಿತರೊಂದಿಗೆ ಸೇರಿ ಹತ್ತೆಗೈದಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.