ವಿಜಯಸಾಕ್ಷಿ ಸುದ್ದಿ, ತುಮಕೂರು
ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ತಿಪಟೂರು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಸ್ ಆಗಿದ್ದಕ್ಕೆ ಸಂಭ್ರಮಾಚರಣೆ ಆಚರಿಸಿದ್ದಾರೆ. ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.
ತಾವೆಲ್ಲ ಪಾಸ್ ಆಗಿದ್ದಕ್ಕೆ ಕುಂಬಳಕಾಯಿ, ತೆಂಗಿನಕಾಯಿ ಒಡೆದು ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ಅಲ್ಲದೇ, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಕಾಲೇಜಿನ ಗೇಟ್ ಮುಂದೆ ವಿದ್ಯಾರ್ಥಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಜಯಕಾರ ಹಾಕಿದ್ದಾರೆ.