ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4 ಸಾವಿರ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಅರ್ಜಿಗಳನ್ನು ಮೇ. 25 ರಿಂದ ಜೂನ್ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು.
ಅಭ್ಯರ್ಥಿಗಳು ಪಿಯುಸಿ, 10+2, ಇಂಟರ್ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಹಾಗೂ ಬುಡಕಟ್ಟು ಜನಾಂಗ, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ. 400 ಹಾಗೂ ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು ರೂ. 200 ಅರ್ಜಿ ಶುಲ್ಕವನ್ನು ಕಟ್ಟಬೇಕು. ಅರ್ಜಿ ಶುಲ್ಕ ಪಾವತಿಸಲು ಜೂನ್ 28 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಬಹುದು.