ವಿಜಯಸಾಕ್ಷಿ ಸುದ್ದಿ, ಮೈಸೂರು
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಂತ್ರಿಗಳು ಗ್ರಾಮಗಳಿಗೆ ಹೋಗುತ್ತಿದ್ದಾರೆ.
ಅವರಿಗೆ ಹಳ್ಳಿ ನೆನಪಾಗುತ್ತಿಲ್ಲ. ಚುನಾವಣೆಗಾಗಿ ಬಾಜಪ ಮುಖಂಡರು ಗ್ರಾಮ ಸ್ವರಾಜ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು
ಮೈಸೂರಿನಲ್ಲಿ ಮಾತನಾಡಿದ ಅವರು,
ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ತಾಲೂಕು ಕೇಂದ್ರಗಳಲ್ಲಿ ಮಾಡಬೇಡಿ. ಕಾಳಜಿಯಿದ್ದರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಿ ಎಂದು ಸಲಹೆ ನೀಡಿದರು.
ಸಚಿವರು ನೆರೆ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಯಾವ ಇಲಾಖೆಗೆ ಯಾವ ಮಂತ್ರಿ ಇದ್ದಾರೆಂಬುವುದೇ ಗೊತ್ತಾಗುತ್ತಿಲ್ಲ. ಅದಕ್ಕಾಗಿ ಕನಿಷ್ಠ ಅರ್ಧ ಗಂಟೆಯಾದರೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಎಂದು ಹೆಚ್ಡಿಕೆ ವ್ಯಂಗ್ಯವಾಡಿದರು.
ಮಂತ್ರಿಗಳು ಗ್ರಾಮಗಳಲ್ಲಿನ ಸಮಸ್ಯೆ ಬಗ್ಗೆ ಮಾತನಾಡುವುದನ್ನು ನಾನು ಎಲ್ಲೂ ಕಂಡಿಲ್ಲ. ಇವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಬೆಳಗಾವಿ ಪ್ರವಾಸ ಮಾಡುತ್ತಿದ್ದು,
ಕೇವಲ ಕೋರ್ ಕಮಿಟಿ ಸಭೆಗಾಗಿ ಹೋಗಿ ವಾಪಸ್ ಆಗುತ್ತಿದ್ದಾರೆ. ಬೆಳಗಾವಿಯಲ್ಲಿ ನೆರೆಯಿಂದಾಗಿರುವ ನಷ್ಟಕ್ಕೆ ಇನ್ನೂವರೆಗೂ ಪರಿಹಾರ ನೀಡಿಲ್ಲ. ಎಲ್ಲ ಮಂತ್ರಿಗಳು ಅಲ್ಲಿಯೇ ಇದ್ದಾರೆ. ಆದರೂ ಅಲ್ಲಿನ ಸಮಸ್ಯೆ ಕೇಳುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.