ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ
Advertisement
ಬಿಜೆಪಿ ಸರ್ಕಾರದ ಜೊತೆ ಚೆನ್ನಾಗಿದ್ದು,
ಕ್ಷೇತ್ರದ ಜನರಿಗೆ ಒಳ್ಳೆಯ ಸುದ್ದಿ ನೀಡಲು ಬಿಜೆಪಿಯವರೊಂದಿಗೆ ಚೆನ್ನಾಗಿದ್ದೇನೆ ಎಂದು ಬಿಎಸ್ಪಿ ಉಚ್ಚಾಟಿತ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕೊಳ್ಳೆಗಾಲದಲ್ಲಿ ಮಾತನಾಡಿದ ಅವರು, ಬಿಜೆಪಿ ಸೇರುವ ಆಪ್ಶನ್ ಯಾವತ್ತಿಗೂ ತೆರೆದಿದ್ದು, 2008 ರಿಂದ ಯಡಿಯೂರಪ್ಪ ಅವರು ನನ್ನೊಂದಿಗೆ ಚೆನ್ನಾಗಿದ್ದಾರೆ ಎಂದರು.
ಕ್ಷೇತ್ರದ ಅಭಿವೃದ್ಧಿಯಾದ ದಿನವೇ ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸುದ್ದಿ. ಸಂಕ್ರಾಂತಿ ಹಬ್ಬಕ್ಕೆ ಸಾಕಷ್ಟು ಅನುದಾನ ಕೊಟ್ಟರೆ ಪಕ್ಕಾ ಒಳ್ಳೆಯ ಸುದ್ದಿ ಕೊಡುತ್ತೇನೆ. ಅಲ್ಲದೇ, ನನ್ನ ಕ್ಷೇತ್ರದ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನ ಲೋಕಾರ್ಪಣೆಗೊಳ್ಳಬೇಕು ಎಂದು ಶಾಸಕ ಎನ್.ಮಹೇಶ್ ಹೇಳಿದರು.