ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
ಕೆಎಸ್ ಆರ್ ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬಿಜಿ ಕೆರೆ ಗ್ರಾಮದ ಬಳಿ ನಡೆದಿದೆ.
ಬೆಳಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದು, KSRTC ಚಾಲಕನ ನಿರ್ಲಕ್ಷಕ್ಕೆ ಐವರ ಬಲಿಯಾಗಿದ್ದಾರೆ.
ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಹೊಸೂರು ಗ್ರಾಮದ ತಿಮ್ಮಣ್ಣ (40), ರತ್ನಮ್ಮ (38), ಸೋಮನ ಮರಡಿ ಗ್ರಾಮದ
ದುರುಗಪ್ಪ (16), ಗಜಿಲಿ ಗ್ರಾಮದ ಮಹೇಶ (19) ಹಾಗೂ 55 ವರ್ಷದ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ.
ಇವರು ಕೂಲಿ ಕಾರ್ಮಿಕರಾಗಿದ್ದು, ರಾಯಚೂರಿನಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು.
ಘಟನೆಯಲ್ಲಿ ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಮೊಳಕಾಲ್ಮೂರು ಠಾಣೆಯ ಪಿಎಸ್ಐ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.