ವಿಜಯಸಾಕ್ಷಿ ಸುದ್ದಿ, ಹಾವೇರಿ
ಯಾರು ಬ್ಲಾಕ್ ಮೇಲ್ ಮಾಡಿಲ್ಲ, ಬ್ಲಾಕ್‌ಮೇಲ್ ಗೆ ಮಂತ್ರಿ ಸ್ಥಾನ ಕೊಡಲ್ಲ. ಸಿಡಿ, ಸಿಡಿ ಅಂತಿದ್ದಾರೆ.
ಸಿಡಿ ವಿಚಾರ ನನಗೆ ಗೊತ್ತಿಲ್ಲ ಎಂದು ನೂತನ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಈ ಕುರಿತು ಮಾತನಾಡಿದ ಅವರು,
ಸಿಡಿ ವಿಚಾರ ವಿಶ್ವನಾಥ್ ಗೆ ಗೊತ್ತಿದೆಯೋ ಏನೋ ನನಗೆ ಗೊತ್ತಿಲ್ಲ. ಅವರನ್ನ ಸಚಿವರನ್ನಾಗಿ ಮಾಡಲು ಕಾನೂನಿನ ತೊಡಕುಗಳಿವೆ. ಮುಂದಿನ ದಿನಗಳಲ್ಲಿ ಅವರಿಗೂ ಮಂತ್ರಿಸ್ಥಾನ ಸಿಗಬಹುದು ಎಂದು ತಿಳಿಸಿದರು.
ಶಾಸಕ ಮುನಿರತ್ನದು ತೊಂದರೆ ಇದೆ. ಅವರ ಮೇಲೋ ಕೆಲವೊಂದು ಪ್ರಕರಣಗಳಿವೆ. ಮುಂದಿನ ದಿನಗಳಲ್ಲಿ ಮುನಿರತ್ನಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂದ ಅವರು, ಯೋಗೇಶ್ವರ ಮೇಲೆ ಏನು ಕೇಸ್ ಗಳಿವೆ ಎಂಬುವುದನ್ನು ಸಾಬೀತು ಮಾಡಬೇಕು ಎಂದು ಸಚಿವರು ಒತ್ತಾಯಿಸಿದರು.
ಸಿದ್ದರಾಮಯ್ಯ ಎಸ್ಟಿ ಹೋರಾಟಕ್ಕೆ ಯಾಕೆ ಬರುತ್ತಿಲ್ಲ ಎಂಬುದನ್ನ ಅವರನ್ನೇ ಕೇಳಬೇಕು. ನಾವೆಲ್ಲಾ ಸಂಪರ್ಕ ಮಾಡಿದ್ದೇವೆ. ಈಶ್ವರಪ್ಪನವರು, ಸ್ವಾಮೀಜಿ ಸೇರಿದಂತೆ ಹಲವರು ಸಿದ್ದರಾಮಯ್ಯರನ್ನ ಭೇಟಿ ಆಗಿ ಪಾದಯಾತ್ರೆಗೆ ಬರಬೇಕು ಅಂತಾ ಆಹ್ವಾನ ಕೊಟ್ಟಿದ್ದೆವು ಎಂದು ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.