34.4 C
Gadag
Tuesday, March 28, 2023

ಭವಿಷ್ಯದಲ್ಲಿ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿ: ಪ್ರಧಾನಿ ಮೋದಿ

Spread the love

ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್-19 ಕಾಲಘಟ್ಟದಲ್ಲಿ ಡಿಟಿಟಲ್ ತಂತ್ರಜ್ಞಾನ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಭವಿಷ್ಯದಲ್ಲಿ ಇನ್ನಷ್ಟು ತಂತ್ರಜ್ಞಾನ ಅಭಿವೃದ್ಧಿ ಯಾಗಲಿದೆ. ಹೀಗಾಗಿ ನಮ್ಮ ಮಾಹಿತಿ ಮಾಹಿತಿ ಹಾಗೂ ದತ್ತಾಂಶ ಸಂರಕ್ಷಿಸಿಕೊಳ್ಳಲು‌ ಸೈಬರ್ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಆರಂಭವಾದ ಬೆಂಗಳೂರು ಟೆಕ್ ಸಮ್ಮೇಳನಕ್ಕೆ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಯುಗದಲ್ಲಿ ನಾವಿದ್ದರೂ ಸೈಬರ್ ಭದ್ರತೆ ಹಾಗೂ ದತ್ತಾಂಶ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.
ಐದು ವರ್ಷದ ಹಿಂದೆ ಡಿಜಿಟಲ್ ಇಂಡಿಯಾ ಯೋಜನೆಗೆ ಚಾಲನೆ ನೀಡಲಾಯಿತು. ಈ ಕ್ಷೇತ್ರದಿಂದ ಜನರಿಗೆ ಹೆಚ್ಚಿನ ಲಾಭವಾಗುತ್ತಿದೆ. ಬಡ, ಮಧ್ಯಮ ವರ್ಗದ ಜತೆಗೆ ಮೇಲ್ವರ್ಗದವರಿಗೂ ಡಿಜಿಟಲ್ ಅನಿವಾರ್ಯವಾಗಿದೆ. ಒಂದೇ ಬಟನ್ ಕ್ಲಿಕ್ ನಿಂದ ರೈತರ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂ. ಸಬ್ಸಿಡಿ ಹಾಗೂ ಇತರ ಹಣಕಾಸನ್ನು ವರ್ಗಾಯಿಸಲಾಗಿದೆ. ಕಳೆದ ತಿಂಗಳು ದೇಶದಲ್ಲಿ 2 ಶತಕೋಟಿ ವಹಿವಾಟು ಡಿಜಿಟಲ್ ಮೂಲಕ ನಡೆದಿದೆ. ಇದನ್ನು ಗಮನಿಸಿದರೆ ನಮ್ಮ‌ಸರಕಾರ ತಂದಿರುವ ಯೋಜನೆ ಪ್ರತಿಯೊಬ್ಬರಿಗೂ ಅನುಕೋಲ ಮಾಡಿಕೊಟ್ಟಿದೆ. ತಂತ್ರಜ್ಞಾನದ ಹೊಸ ಸವಾಲುಗಳನ್ನು ಎದುರಿಸಿ ನವೀನ ಆವಿಷ್ಕಾರಕ್ಕೆ ಮುಂದಾಗಬೇಕು. ಜಾಗತಿಕ ಮಟ್ಟದಲ್ಲೂ ಭಾರತ ಹೆಚ್ಚಿನ ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದು, ಇದನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಸರಕಾರ ಎಲ್ಲ ರೀತಿಯ ನೆರವು ಹಾಗೂ ಸಹಕಾರವನ್ನು ನೀಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಸಿ.ನಾರಾಯಣಗೌಡ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,749FollowersFollow
0SubscribersSubscribe
- Advertisement -spot_img

Latest Posts

error: Content is protected !!