ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
Advertisement
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ನಗರದ ಗಾಂಧಿ ವೃತ್ತ, ಮುಳಗುಂದ ನಾಕಾ, ಚೆನ್ನಮ್ಮ ವೃತ್ತದಲ್ಲಿ ಸೂಕ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಹಲವು ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಎಂಟು ಗಂಟೆಯವರೆಗೂ ನಗರದಲ್ಲಿ ಬಂದ್ ವಾತಾವರಣ ಕಂಡು ಬರುತ್ತಿಲ್ಲ. ಎಂದಿನಂತೆ ವಾಹನ ಸಂಚಾರ ಇದೆ.