ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅತಿಯಾದ ಮಳೆಯಿಂದಾಗಿ ಚರಂಡಿ ನೀರೂ ಸಹ ಮನೆಗಳಿಗೆ ನುಗ್ಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿಯಲ್ಲಿ ನಡೆದಿದೆ.
ಗ್ರಾಮದ ತಗ್ಗಿನ ಪ್ರದೇಶದಲ್ಲಿರುವ ವಡ್ಡರ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಸುರಿದ ಮಳೆಯಿಂದಾಗಿ ಮಳೆ ನೀರಿನ ಜೊತೆ ಚರಂಡಿ ನೀರೂ ಸಹ ಮನೆಗಳಿಗೆ ನುಗ್ಗಿ ಜನರು ಪರದಾಡುವಂತೆ ಮಾಡಿದೆ.
ವಡ್ಡರ ಪಾಳ್ಯದಲ್ಲಿರುವ ಬಹುತೇಕ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ರಾತ್ರಿಯಿಡಿ ಮನೆಯಿಂದ ನೀರು ಹೊರಹಾಕಲು ಜನ್ರು ಹರಸಾಹಸ ಪಡುವಂತಾಗಿತ್ತು.
ಮನೆಯಲ್ಲಿನ ಧವಸಧಾನ್ಯಗಳು ನೀರುಪಾಲಾಗಿದ್ದು, ಸರಿಯಾದ ಚರಂಡಿ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಮೊದಲೇ ಇಲ್ಲಿ ಚರಂಡಿ ನಿರ್ಮಿಸಲು, ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಯಾವೊಬ್ಬ ಅಧಿಕಾರಿಗಳೂ ತಲೆ ಕೆಡೆಸಿಕೊಂಡಿಲ್ಲ. ಇನ್ನು ಶಾಸಕ ರಾಮಣ್ಣ ಲಮಾಣಿ ಸಹ ಸ್ಪಂದನೆ ನೀಡುತ್ತಿಲ್ಲ ಅಂತ ನಿವಾಸಿಗಳ ಅಳಲು ತೋಡಿಕೊಂಡಿದ್ದಾರೆ.