ಮಾಸಾಶನ, ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಯ ಅನುದಾನಕ್ಕೆ ಮಹಾಮಂಡಳ ಆಗ್ರಹ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

Advertisement

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಮತ್ತು ಬಂಡವಾಳ ಹೂಡಿಕೆಗೆ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಕಾರ್ಪೆಂಟರ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಬ್ಸಿಡಿ ಸಾಲ ಮತ್ತು ಸಹಾಯಧನ ನೀಡುವ ಯೋಜನೆಗೆ ಅವಶ್ಯಕ ಇರುವ ಅನುದಾನವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ್ ಪಾಟೀಲ್‍ಗೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸರಕು ವಾಹನ, ಪ್ರಯಾಣಿಕ ಆಟೋ ಮತ್ತು ಸರಕು ಆಟೋ ಖರೀದಿಗೆ 1 ಲಕ್ಷ ರೂ,ಸಬ್ಸಿಡಿ ಮತ್ತು ಕಾರ್, ಜೀಪ್ ಖರೀದಿಗೆ 3 ಲಕ್ಷ ರೂ.ಸಬ್ಸಿಡಿ ಆಧಾರಿತ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ, ವಿಧವೆ, ವಿಚ್ಛೇದಿತ ಮತ್ತು ಏಕ ಮಹಿಳೆಯರಿಗೆ ನವೋದ್ಯಮ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಒದಗಿಸಲು, ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅನುದಾನ ಒದಗಿಸಲು ಅವರು ಆಗ್ರಹ ಮಾಡಿದ್ದಾರೆ.

ಇನ್ನೂ ಉರ್ದು ಅಕಾಡಮಿಯಲ್ಲಿ 70 ವರ್ಷ ಮೀರಿದ ಪ್ರತಿಷ್ಠಿತ ಉರ್ದು ಸಾಹಿತಿಗಳಿಗೆ ಮಾಸಾಶನ ಮತ್ತು ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗೆ ಧನ ಸಹಾಯ ನೀಡುವ ಹೊಸ ಯೋಜನೆಗೆ, ಉರ್ದು ಅಕಾಡಮಿಯ ವಿವಿಧ ಕಾರ್ಯಕ್ರಮಗಳಿಗೆ ಅವಶ್ಯಕತೆ ಇರುವ ವಾರ್ಷಿಕ ಅನುದಾನ ಹಾಗೂ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಿ ಇದನ್ನು ಕಾರ್ಯರೂಪಕ್ಕೆ ತರುವಂತೆ ಅವರು ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here