ವಿಜಯಸಾಕ್ಷಿ ಸುದ್ದಿ ಮಂಗಳೂರು
ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗಿರುವುದು ಖುಷಿ ತಂದಿದೆ. ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ಕೊಡುತ್ತೇವೆ. ಆದರೆ, ದಕ್ಷಿಣ ಕನ್ನಡದ ಹಿರಿಯ ಉಸ್ತುವಾರಿ ಸಚಿವರ ಬದಲಾವಣೆ ಎಷ್ಟು ಸರಿ.? ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನಿಸಿದರು.
ಮಂಗಳೂರಿನಲ್ಲಿ ಈ ಕುರಿತು ಮಾತನಾಡಿರುವ ಅವರು,
ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ನೀಡಲಾಗಿದೆಯಾ? ಎಂಬ ಬಗ್ಗೆ ಜನರು ಈ ಎಲ್ಲಾ ವಿಚಾರ ಅರ್ಥ ಮಾಡಿಕೊಳ್ಳಬೇಕಾಗಿದೆ.
ಆಡಳಿತದಲ್ಲಿರೋ ಸರ್ಕಾರದ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ದೂಷಿಸಿದರೆ ದೇಶದ್ರೋಹಿ ಎಂದಾದರೆ,
ಸಿಎಂರನ್ನು ದೂಷಿಸಿದರೆ ದೇಶದ್ರೋಹಿ ಆಗಲ್ವಾ.?. ಇದಕ್ಕೆಲ್ಲಾ ಪಕ್ಷದ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಬೇಕು.
ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಯವರೇ ಮುನಿರತ್ನಗೆ ಸಚಿವ ಸ್ಥಾನ ಕೊಡದಿರುವುದ್ದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.