ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ: ಪ್ರವಾಸದ ವಿವರ ಹೀಗಿದೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು, 16 ರಂದು ಬೆಂಗಳೂರಿಗೆ ಬರಲಿದ್ದು, ಅಲ್ಲಿ ಇಲಾಖೆ ಪರಿಶೀಲನೆ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಭದ್ರಾವತಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳಿ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿ ಮಾಹಿತಿ ತಿಳಿಸಿದ ಅವರು, ಜ.17 ರಂದು ಬೆಳಗ್ಗೆ 10.30ಕ್ಕೆ ಅಮಿತ್ ಶಾ ಅವರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಬೆಳಗ್ಗೆ ಬಾಗಲಕೋಟೆಯಲ್ಲಿ ಸಕ್ಕರೆ ಕಾರ್ಖಾನೆ ಉದ್ಘಾಟನೆ ಮಾಡಿ ಮರಳಿ ಬೆಳಗಾವಿಗೆ ಬರಲಿದ್ದಾರೆ. ಅಂದು ಮಧ್ಯಾಹ್ನ ಬೆಳಗಾವಿಯಲ್ಲಿ ಜನಸೇವಕ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ
ಬೆಳಗಾವಿಯಲ್ಲಿಯೇ ಅಮಿತ್ ಶಾ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ ಎಂದರು.

ಬಳಿಕ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಜ.17 ರ ಸಂಜೆ ಅಧಿಕಾರಿಗಳ ಸಭೆ ನಡೆಸಿ ಮರಳಿ ದೆಹಲಿಗೆ ತೆರಳಲಿದ್ದಾರೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here