ವಿಜಯಸಾಕ್ಷಿ ಸುದ್ದಿ, ಮೈಸೂರು: ರಾಜ್ಯದಲ್ಲಿ ಕಲ್ಲು ಗಣಿಗಾರಿಕೆ ಅನಿವಾರ್ಯವಾಗಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಇಲ್ಲಿ ಹೇಳಿದರು.
Advertisement
ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ನಡೆಯುತ್ತಿದ್ದು, ರಸ್ತೆ ಕಾಮಗಾರಿಗಳಿಗೆ ಗಣಿಗಾರಿಕೆ ಅವಶ್ಯಕತೆ ಇದೆ. ಆದರೆ ಅಕ್ರಮ ಗಣಿಗಾರಿಕೆ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಕ್ರಮ ಗಣಿಗಾರಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.
ಇನ್ನು ಎಲ್ಲಾ ಜಿಲ್ಲೆಗಳಲ್ಲೂ ಗಣಿಗಾರಿಕೆ ಪರಿಶೀಲನೆಗೆ ಆಯಾ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಶಿವಮೊಗ್ಗದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ಕೊಡ್ತೀವಿ ಎಂದು ಇಲ್ಲಿನ ಮಂಡಕ್ಕಳ್ಳಿ ಏರ್‌ಪೋರ್ಟ್‌ನಲ್ಲಿ ಸಿಎಂ ಹೇಳಿದರು.