ವಿಜಯಸಾಕ್ಷಿ ಸುದ್ದಿ, ಗದಗ
ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರು ಸ್ಪಷ್ಟಪಡಿಸಿದರು.
ಗದಗನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರುತ್ತಾರೆ. ಹಾಗಾಗಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಕೇವಲ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.
ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು,
ಸಿಎಂ ಅವ್ರೇ ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಅವತ್ತಿಗೆ ಗೊತ್ತಾಗಲಿದೆ ಎಂದು ಹೇಳಿದ್ದು, ಅಲ್ಲಿಯವರೆಗೆ ಕಾದು ನೋಡಿ ಎಂದ ಅವರು,ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು
ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೋಣ ಶಾಸಕ ಕಳಕಪ್ಪ ಬಂಡಿ ಇದ್ದರು.