ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಶಾಲೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ. ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುವುದು ಸಲ್ಲದು. ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಪಂಚಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಮನಗುಂಡಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 109 ಶಿಕ್ಷಕರು ಮರಣ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿಯ ರಾಮದುರ್ಗ ತಾಲೂಕಿನ ಎ.ತಿಮ್ಮಾಪೂರ ಗ್ರಾಮದ ಶಾಲಾ ಮಕ್ಕಳಿಗೆ ರ‍್ಯಾಪಿಡ್ ಟೆಸ್ಟ್ ಮಾಡಲಾಗಿ 130 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳಿಗೆ ಕೊರೋನಾ ಸೋಫಂಖು ಇರುವುದು ಪತ್ತೆಯಾಗಿರುವುದು ಆತಂಕಕಾರಿ ವಿಚಾರ ಎಂದರು.
ಜನಪ್ರತಿನಿಧಿಗಳು ಸುಸಜ್ಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರೂ ಮೃತಪಟ್ಟಿದ್ದಾರೆ. ಇನ್ನು ಸಾಮಾನ್ಯ ಜನರು, ಮಕ್ಕಳು, ಶಿಕ್ಷಕರ ಪಾಡೇನು ಎಂದು ಪ್ರಶ್ನಿಸಿರುವ ಅವರು, ಕೂಡಲೇ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮುಖ್ಯಮಂತ್ರಿ, ಸಚಿವರ ಮನೆಗಳಿಗೆ ಮುತ್ತಿಗೆ ಹಾಕಿ ದಿಗ್ಭಂಧನ ವಿಧಿಸಲಾಗುವುದು ಎಂದು ಪಂಚಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಮನಗುಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಪಂಚಸೇನೆ ಹೋರಾಟದ ಎಚ್ಚರಿಕೆ
Advertisement