ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
Advertisement
ಇಲ್ಲಿನ ದತ್ತಾತ್ರೇಯ ಪೀಠದ ದರ್ಶನ ಪಡೆದು ಕೊರೋನಾ ನಿರ್ಮೂಲನೆಗೆಗಾಗಿ ಸಂಸದೆ ಶೋಭಾ ಕರಂದ್ಲಾಜೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಸಂಸದೆ,
ಅಯೋಧ್ಯೆಯ ರಾಮಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಿಸಲಾಗುತ್ತದೆ.
ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ ಸಿಗುತ್ತದೆ.
ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿದ್ದು, ತಜ್ಞರು ಪರಿಶೀಲಿಸುತ್ತಿದ್ದಾರೆ. ಜಗತ್ತಿನಲ್ಲಿ ದತ್ತ ಭಕ್ತರಿದ್ದು, ಚಿಕ್ಕಮಗಳೂರಿನಲ್ಲಿ ದತ್ತಪಾದುಕೆ ಇದೆ. ದತ್ತಪೀಠ ನಮ್ಮದಾಗಬೇಕೆಂಬುವುದೇ ನಮ್ಮ ಸಂಕಲ್ಪ ಎಂದು ಸಂಸದೆ ಶೋಭಾ ಕರಂದ್ಲಾಜೆ ಶಪತಗೈದರು.