ವಿಜಯಸಾಕ್ಷಿ ಸುದ್ದಿ, ನರಗುಂದ: ಲಾರಿ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Advertisement
ಮೃತ ದುರ್ದೈವಿಯನ್ನು ಶರಣಪ್ಪ ಭಜಂತ್ರಿ (45) ಎಂದು ಗುರುತಿಸಲಾಗಿದೆ. ಮೃತನು ಗದಗ ತಾಲೂಕಿನ ಹುಯಿಲಗೋಳ ಗ್ರಾಮದವನೆಂದು ತಿಳಿದುಬಂದಿದೆ.

ಘಟನೆಯಲ್ಲಿ ನಾಲ್ಕು ಜನರಿಗೆ ಗಾಯಗಳಾಗಿದ್ದು, ನರಗುಂದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.