ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
Advertisement
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಾಡುಹಗಲೇ ಚಾಕು ಹಾಕಿರುವ ಘಟನೆ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ನರೇಗಲ್ ಗ್ರಾಮದ ಬಷೀರ್ ಅಹ್ಮದ ಹಂಚಿನಮನಿ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಈತ ಹಳೇ ಬಸ್ ನಿಲ್ದಾಣದ ಬಳಿ ಎಳೆನೀರು ಮಾರಾಟ ಮಾಡುತ್ತಿದ್ದ.

ಆದ್ರೆ ಇಂದು ಮಧ್ಯಾಹ್ನ ಎಳನೀರು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಬಂದು ದುಷ್ಕರ್ಮಿಗಳು ಎದೆಯ ಕೆಳಭಾಗದಲ್ಲಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರು, ಯಾಕೆ ಚಾಕು ಹಾಕಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಹಳೇ ವೈಷಮ್ಯದಿಂದ ಚಾಕು ಹಾಕಿರಬೇಕು ಎನ್ನಲಾಗುತ್ತಿದೆ. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.