ವಿಜಯಸಾಕ್ಷಿ ಸುದ್ದಿ, ಗದಗ
ನಗರದ ಮುಳಗುಂದ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದ ಎದುರಿಗೆ ಇರುವ ಸರ್ವೀಸ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾದ ಘಟನೆ ಜರುಗಿದ.
ಹಿರೇಮಠ ಸೇಲ್ಸ್ ಆಂಡ್ ಸರ್ವೀಸ್ ಸೆಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಗುರು ಹಿರೇಮಠ ಎಂಬುವವರಿಗೆ ಸೇರಿದ ಈ ಸರ್ವೀಸ್ ಸೆಂಟರ್ನಲ್ಲಿ ಫ್ರಿಜ್, ಏರ್ ಕಂಡೀಷನರ್, ವಾಷಿಂಗ್ ಮಷೀನ್ ಸೇರಿ ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳಿದ್ದವು.
ಬೆಂಕಿ ಅವಘಡದ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹರಸಾಹಸ ನಡೆಸಿ ಬೆಂಕಿ ನಂದಿಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.



