ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ರಾಜಕೀಯವೇ ಒಂದು ಸಂಚು.
ಸಂಚನ್ನು ಒಬ್ಬರೇ ಮಾಡಲ್ಲ.
ಸಂವಿಧಾನ ರಚಿಸಿದ ಅಂಬೇಡ್ಕರ್‌ರನ್ನೇ ಸೋಲಿಸಲಿಲ್ಲವೇ ? ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಚಾಮುಂಡೇಶ್ವರಿ ಸೋಲಿಗೆ ಬಿಜೆಪಿ- ಜೆಡಿಎಸ್ ಸಂಚು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,
ಪ್ರಧಾನಿಯಾಗಿದ್ದ ದೇವೇಗೌಡರನ್ನು ತುಮಕೂರಿನಲ್ಲಿ ಸಂಚು ಮಾಡಿ ಸೋಲಿಸಲಿಲ್ಲವೇ?
ಮಂಡ್ಯದಲ್ಲಿ ನಿಖಿಲ್ ವಿರುದ್ಧ ಸಂಚು ಆಗಲಿಲ್ಲವೇ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ರಾಜಕಾರಣದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಅಂತಹ ಮನಸ್ಥಿತಿ ಸಿದ್ದರಾಮಯ್ಯಗೆ ಇದೆ. ಆದರೆ, ಅದನ್ನು ಅವರು ಅರ್ಥ ಮಾಡಿಕೊಂಡು ಸ್ವೀಕರಿಸಲಿ ಎಂದು ಸಾ.ರಾ.ಮಹೇಶ್ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದರು.